ಗರ್ಭಿಣಿ ಮಹಿಳೆಯರಿಗೆ ಪೌಷ್ಟಿಕ ಆಹಾರ ಸೇವನೆ ಅತ್ಯಂತ ಅವಶ್ಯಕ ಎಂದು ಸರ್ಕಾರಿ ಆಸ್ಪತ್ರೆಯ ಮುಖ್ಯ ಆರೋಗ್ಯ ಅಧಿಕಾರಿ ಡಾ. ನಾಗನಾಥ್ ಹುಲಸೂರೆ ಸಲಹೆ ನೀಡಿದರು. ನಗರದಲ್ಲಿ ಶುಕ್ರವಾರ ಮಧ್ಯಾಹ್ನ 1ಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾನೂನು ಸೇವಾ ಪ್ರಾಧಿಕಾರ ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ಪೌಷ್ಟಿಕ ಆಹಾರ ದಿನಾಚರಣೆ ನಿಮಿತ್ತ ನಡೆದ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು.