ದಾಂಡೇಲಿ : ತಾಲೂಕು ಕಾನೂನು ಸೇವಾ ಸಮಿತಿ ದಾಂಡೇಲಿ, ನ್ಯಾಯವಾದಿಗಳ ಸಂಘ ದಾಂಡೇಲಿ, ಅಭಿಯೋಜನ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ನಗರಸಭೆ, ಶಿಕ್ಷಣ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಇವರ ಸಯುಕ್ತ ಆಶ್ರಯದಲ್ಲಿ ವಿಶ್ವ ಪೌಷ್ಟಿಕಾಂಶ ದಿನಾಚರಣೆ ಕಾರ್ಯಕ್ರಮವನ್ನು ನಗರದ ರೋಟರಿ ಶಾಲೆಯ ಸಭಾಭವನದಲ್ಲಿ ಸೋಮವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ತೇಜಸ್ವಿನಿ ಸೊಗಲದ್ ಅವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿ ಆರ್ ಸಿ ಲಲಿತ ಪುಟ್ಟೇಗೌಡ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಹಾಯಕ ಸರಕಾರಿ ಅಭಿಯೋಜಕರಾದ ರಮೇಶ್ ಎಂ ಬಂಕಾಪುರ ಭಾಗವಹಿಸಿದ್ದರು.