ಧರ್ಮಸ್ಥಳದಲ್ಲಿ ಶವಗಳನ್ನ ಹೂತಿಟ್ಟ ಆರೋಪದ ಹಿನ್ನೆಲೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಳಂಕ ತರಲಾಗುತ್ತಿದೆ ಎಂದು ಆರೋಪಿಸಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಿಂದ ಶಾಸಕ ಆರಗ ಜ್ಞಾನೇಂದ್ರ ಅವರ ನೇತೃತ್ವದಲ್ಲಿ ಶನಿವಾರ ಬೆಳಗ್ಗೆ ಧರ್ಮಸ್ಥಳ ಅಭಿಮಾನಿಗಳಿಂದ ಧರ್ಮ ಯಾತ್ರೆಯನ್ನ ಕೈಗೊಳ್ಳಲಾಗಿದೆ. 200 ಕಾರುಗಳಲ್ಲಿ ಧರ್ಮಸ್ಥಳಕ್ಕೆ ಭಕ್ತಾದಿಗಳು ಹೊರಟಿದ್ದು ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಧರ್ಮಸ್ಥಳವನ್ನು ತಲುಪಲಿದ್ದಾರೆ. ಧರ್ಮಸ್ಥಳ ಕ್ಷೇತ್ರದ ಮೇಲೆ ಆಗುತ್ತಿರುವ ಅನ್ಯಾಯವನ್ನು ಖಂಡಿಸುವಂತೆ ಧರ್ಮಸ್ಥಳದ ಅಭಿಮಾನಿಗಳು ಒತ್ತಾಯಿಸಿದರು.