ಮಳವಳ್ಳಿ ತಾಲ್ಲೂಕಿನ ಬಾಳೆ ಹೊನ್ನಿಗ ಗೇಟ್ ಬಳಿ ಮೋಟಾರು ಬೈಕ್ ಮತ್ತು ಕಾರು ನಡುವೆ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಹಲಗೂರು ಸಮೀಪದ ಬಾಳೆಹೊನ್ನಿಗ ಗ್ರಾಮದ 52 ವರ್ಷದ ಗೋಪಾಲ ಮೃತ ವ್ಯಕ್ತಿ. ಕಾರ್ಯನಿಮಿತ್ತ ದಳವಾಯಿ ಕೋಡಿಹಳ್ಳಿ ಗ್ರಾಮಕ್ಕೆ ತೆರಳಿದ್ದ ಗೋಪಾಲ ಅವರು ಸ್ವಗ್ರಾಮಕ್ಕೆ ಹಿಂತಿರುಗುತ್ತಿದ್ದಾಗ ಹಲಗೂರು ಕಡೆಯಿಂದ ಬಂದ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ಗೋಪಾಲ ಅವರನ್ನು ಹಾರೋಹಳ್ಳಿ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರು. ಬೈಕ್ ಹಿಂಬದಿ ಸವಾರ ವೆಂಕಟಯ್ಯ ಸಹ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.