ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕೊಲ್ಹಾರ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ರೈತರು ಧರಣಿ ಸತ್ಯಾಗ್ರಹ ಆರಂಭಿಸಿದ್ದರು. ಅಧಿಕಾರಿಗಳ ಭರವಸೆ ಹಿನ್ನೆಲೆಯಲ್ಲಿ ಧರಣಿ ಸತ್ಯಾಗ್ರಹ ಕೈಬಿಟ್ಟಿದ್ದಾರೆ. ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಬೆಂಬಲದೊಂದಿಗೆ ಆಗಸ್ಟ್ 25ರಿಂದ ಧರಣಿ ಸತ್ಯಾಗ್ರಹ ಆರಂಭಿಸಿದ್ದರು..