ಗದಗ ಬೆಟಗೇರಿ ಅವಳಿ ನಗರದಲ್ಲಿ ಮುಸ್ಲಿಂ ಸಮಾಜದ ಕೆಲ ಕಿಡಿಗೇಡಿಗಳು ಕಾರಿನ ಮೇಲೆ ಪಾಕಿಸ್ತಾನದ ಧ್ವಜ ಹಾಕಿರುವುದು ಖಂಡನೀಯ. ಅವಳಿ ನಗರ ಹಿಂದೂ ಮುಸ್ಲಿಂ ಭಾವೈಕ್ಯತೆಗೆ ಹೆಸರಾಗಿದೆ. ಇಂಥ ನೆಲದಲ್ಲಿ ದೇಶವಿರೋಧಿ ಕೃತ್ಯವನ್ನು ಸಹಿಸುವುದಿಲ್ಲ. ಅಂಥವರಿಗೆ ಕಠಿಣ ಶಿಕ್ಷೆ ಆಗಬೇಕು. ಮುಸ್ಲಿಂ ಸಮಾಜದ ಮುಖಂಡರು ಸಭೆ ಸೇರಿ, ಭವಿಷ್ಯದಲ್ಲಿ ಇಂಥ ಘಟನೆಗಳು ನಡೆಯದಂತೆ ಯುವಕರಿಗೆ ಎಚ್ಚರಿಕೆ ನೀಡಬೇಕು. ಇಂಥ ಘಟನೆಗಳು ಮರುಕಳಿಸಿದರೆ ಹಿಂದೂ ಸಂಘಟನೆಗಳು ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ ಅಂತ ಎಚ್ಚರಿಕೆ ನೀಡಿದರು.