ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಆವದನ್ನು ಸರಕಾರ ಆಯ್ಕೆ ಮಾಡುವ ಮೂಲಕ ಹಿಂದೂಗಳ ಭಾವನೆಗೆ ಧಕ್ಕೆ ತರಲು ಹೊರಟಿದೆ ಎಂದು ವಿಶ್ವ ಹಿಂದೂ ಪರಿಷತ್ ನಗರ ಘಟಕದ ಅಧ್ಯಕ್ಷ ಮಹೇಶ್ ಕಾಮತ್ ಹೇಳಿದರು. ಪತ್ರಕರ್ತರ ಭವನದಲ್ಲಿ ಮಾತನಾಡಿದ ಅವರು, ಬಾನು ಮುಷ್ತಾಕ್ ಅವದು ಕನ್ನಡ ತಾಯಿಯನ್ನೇ ಒಪ್ಪಿದವರಲ್ಲ. ಈ ಮೂಲಕ ಕನ್ನಡ ವಿರೋಧಿಯಾಗಿರುವ ಅಂತಹವರಿಂದ ದಸರಾ ಉದ್ಘಾಟನೆಗೆ ಮುಂದಾಗಿರುವುದು ಅಕ್ಷಮ್ಯ ಅಪರಾಧ ಹಾಗೂ ದಸರಾ ಇತಿಹಾಸಕ್ಕೆ ಕಳಂಕ ತರುವ ಪ್ರಯತ್ನವಾಗಿದೆ ಎಂದು ಆರೋಪಿಸಿದರು.