ಬುರುಜನರೊಪ್ಪ ಗೇಟ್ ಬಳಿ ಹೈವೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿಯಾಗಿ, ಚಾಲಕ ಸಾವನ್ನಪ್ಪಿರುವ ಘಟನೆ ಶುಕ್ರವಾರ ಬೆಳಗಿನ ಜಾವ 4 ಗಂಟೆಗೆ ಜರುಗಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಐಮಂಗಲ ಸಮೀಪ ನಡೆದಿದೆ. ಮೃತ ವ್ಯಕ್ತಿಯನ್ನ ಮಹಾರಾಷ್ಟ್ರ ಮೂಲಕದ ನಂದು ಠಾಕೂರ್ ಎಂದು ಗುರುತಿಸಲಾಗಿದೆ. ಮಹಾರಾಷ್ಟ್ರದಿಂದ ತಮಿಳುನಾಡಿಗೆ ಕಬ್ಬು ಬೆಳೆ ಕಡಿಯುವ ಸಲುವಾಗಿ ಹೋಗುತ್ತಿದ್ದಾಗ ಮಾರ್ಗ ಮಧ್ಯದಲ್ಲಿ ಅಪಘಾತ ಸಂಭವಿಸಿದೆ. ಟ್ರಾಕ್ಟರ್ ಚಾಲಕನ ಅತಿವೇಗ & ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಐಮಂಗಲ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ