ಜನ ಸಂದಣಿ ಇರುವ ಪ್ರದೇಶಗಳಲ್ಲಿ ಯಾವುದೇ ಅವಘಡಗಳು ಸಂಬಂಧಿಸಿದಂತೆ ತಡೆಯಲು ಪ್ರಮಾಣಿತ ಕಾರ್ಯಾಚರಣೆ ವಿಧಾನ (sop) ಪಾಲನೆಯನ್ನು ಸಂಬಂಧಿಸಿದ ಎಲ್ಲಾ ಇಲಾಖೆಯ ಅಧಿಕಾರಿಗಳು ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದರು. ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜನ ಸಂದಣಿ ನಿರ್ವಹಣೆಗೆ ಸಂಬಂಧಿಸಿದಂತೆ ಪ್ರಮಾಣಿತ ಕಾರ್ಯಾಚರಣೆ ವಿಧಾನ (sop) ಕುರಿತಂತೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದಸರಾ ಆಚರಣೆ ಯುವ ಸಂಭ್ರಮ, ಯುವ ದಸರಾ, ಅರಮನೆ ಕಾರ್ಯಕ್ರಮಗಳು, ವಸ್ತು ಪ್ರದರ್ಶನ ಆವರಣದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಜನ ಸೇರುತ್ತಾರೆ. ಈ ಪ್ರದೇಶಗಳಲ್ಲಿ ಹೆಚ್ಚಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ