ಬಿಡದಿ ಹೋಬಳಿಯ ಬೈರಮಂಗಲ ಪಂಚಾಯಿತಿ ವ್ಯಾಪ್ತಿಯ ಜೋಗರಪಾಳ್ಯ ಗ್ರಾಮದಲ್ಲಿ ಶ್ರೀ ಮಾರಮ್ಮ ದೇವಾಲಯದ ಉದ್ಘಾಟನೆ ಸಮಾರಂಭದಲ್ಲಿ ಶಾಸಕ ಬಾಲಕೃಷ್ಣ ಭಾಗಿಯಾಗಿದ್ದರು. ಶುಕ್ರವಾರ ಗ್ರಾಮದಲ್ಲಿ ನೂತನ ದೇವಾಲಯ ಉದ್ಘಾಟನೆ ಕಾರ್ಯಕ್ರಮವನ್ನ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಬಾಲಕೃಷ್ಣ ಭಾಗಿಯಾಗಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು.