ಸರ್ಕಾರ ಒಳ ಮೀಸಲಾತಿ ಘೋಷಣೆ ಮಾಡಿದ ಬಳಿಕ ಇದೀಗ ಮತ್ತೊಂದು ವಿವಾದ ಹುಟ್ಟಿಕೊಂಡಿದೆ. ಕೆಲವರಿಗೆ ನ್ಯಾಯವಾದ್ರೇ ಇನ್ನೂ ಹಲವರಿಗೆ ಅನ್ಯಾಯವಾಗಿದೆ ಎಂದು ರಾಜ್ಯದಲ್ಲಿ ಹೋರಾಟ ನಡೆಯುತ್ತಿದೆ. ಒಳ ಮೀಸಲಾತಿಯಲ್ಲಿ ಆಗಿರೋ ಅನ್ಯಾಯದ ವಿರುದ್ಧ ಸೆಪ್ಟೆಂಬರ್ ಮೂರರಂದು ಅಲೆಮಾರಿ ಸಮುದಾಯದ ಜನಾಂಗದವರು ಫ್ರೀಡಂ ಪಾರ್ಕ್ ಬಳಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಸಮುದಾಯದ ಮುಖಂಡರು ಹೇಳಿದ್ದಾರೆ. ಸೋಮವಾರ ಬೆಳಿಗ್ಗೆ 11ಗಂಟೆಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಮುದಾಯದ ಮುಖಂಡರು ಅಲೆಮಾರಿ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಅಲೆಮಾರಿಗಳು ನಿರಂತರ ಹೋರಾಟ ಮಾಡುತ್ತಿದ್ದಾರೆ. ನ್ಯಾಯಮೂರ್ತಿ ನಾಗಮೋಹನ ದಾಸ್ ಅವರ ವರದಿಯಲ್ಲಿ ಅಲೆಮಾರಿ ಜನಾಂಗದವರಿಗೆ ಪ್ರತ್ಯೇಕ ಒಂದು ಪರ್ಸೆಂಟ್ ಮೀಸ