ವೀರಪ್ಪನ್ ವಿರುದ್ಧ ಕಾರ್ಯಾಚರಣೆ, ಕಳ್ಳಬೇಟೆಗಾರರ ಹತ್ತಿಕ್ಕುವ ವೇಳೆ, ಕಾಡ್ಗಿಚ್ಚು ನಂದಿಸುವ ವೇಳೆ, ಮಾನವ – ಪ್ರಾಣಿಗಳ ಸಂಘರ್ಷದ ವೇಳೆ ಬಲಿಯಾದವರಿಗೆ 50 ಲಕ್ಷ ರೂ. ಪರಿಹಾರ ನೀಡುವುದಾಗಿ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಬುಧವಾರ ಮಧ್ಯಾಹ್ನ ೧೨ ಗಂಟೆ ಸುಮಾರಿಗೆ ಮಲ್ಲೇಶ್ವರಂನ ಅರಣ್ಯ ಭವನದಲ್ಲಿ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 62 ಜನ ಹುತಾತ್ಮರಾಗಿದ್ದಾರೆ. ವೀರಪ್ಪನ್ ವಿರುದ್ಧ ಕಾರ್ಯಾಚರಣೆ, ಕಳ್ಳಬೇಟೆಗಾರರ ಹತ್ತಿಕ್ಕುವ ವೇಳೆ, ಕಾಡ್ಗಿಚ್ಚು ನಂದಿಸುವ ವೇಳೆ, ಮಾನವ – ಪ್ರಾಣಿಗಳ ಸಂಘರ್ಷದ ವೇಳೆ ಬಲಿಯಾದವರು ಇವರು. ಹುತಾತ್ಮರಾದವರಿಗೆ 50 ಲಕ್ಷ ಪರಿಹಾರ ನೀಡಲಿದ್ದೇವೆ ಎಂದು ಭರವಸೆ ನೀಡಿದರು.