ತಾಲೂಕಿನ ಸುಣಕಲ್ಲಬಿದರಿ ಗ್ರಾಮದಲ್ಲಿ ಮನೆಯಲ್ಲಿ ಯಾರೂ ಇಲ್ಲದಿರುವ ಕಳ್ಳರು ಚಿನ್ನಾಭರಣ ಕದ್ದು ಪರಾರಿಯಾಗಿದ್ದಾರೆ. ಖಾಸಗಿ ಕಂಪನಿಯ ಉದ್ಯೋಗಿ ಶಿವಾನಂದ ಕೆಳಗಿನಮನಿ ಎಂಬುವವರಿಗೆ ಸೇರಿದ ಮನೆ ಕಳ್ಳತನವಾಗಿದೆ. ಮನೆಯಲ್ಲಿ ಯಾರೂ ಇಲ್ಲದಿರುವಾಗ ಒಳನುಗ್ಗಿದ ಕಳ್ಳರು 40,300 ರೂಪಾಯಿ ಕಿಮ್ಮತ್ತಿನ ಬೆಲೆ ಬಾಳುವ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾರೆ. ಹಲಗೇರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.