ರಾಯಚೂರು ತಾಲೂಕಿನ ಯಕ್ಲಾಸಪುರ ಗ್ರಾಮದ ನಿವಾಸಿಗಳು ನಗರ ಹೊರವಲಯದಲ್ಲಿ ಬೀಡು ಬಿಟ್ಟಿರುವ ಬಿಡಾಡಿ ದನಗಳನ್ನು ಲಾರಿಗಳಲ್ಲಿ ಹೊತ್ತೊಯ್ದು ಬೇರೆ ಕಡೆಗೆ ಸಾಗಾಟ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ.ಶನಿವಾರ ಬೆಳಗಿನ ಜಾವ ಪೊಲೀಸರಿಗೆ ಮಾಹಿತಿ ನೀಡಿದ ಗ್ರಾಮಸ್ಥರು, ಕೂಡಲೇ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.ಬಾಬಖಾನ್ ಎಂಬುವವರು ಕೆಲಸಕ್ಕೆ ಕರಿಯಿಸಿ ಬಿಡಾಡಿ ದನಗಳನ್ನು ಲಾರಿಗಳಲ್ಲಿ ತುಂಬಿಸಿ ಕಳುಹಿಸಿದ್ದಾರೆ ಎಂದು ಗ್ರಾಮಸ್ಥರು ಹೇಳಿದ್ದು ರಾಯಚೂರ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.