ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಮಂಜೂರಾದ ಅನುದಾನಕ್ಕೆ ತಕ್ಕಂತೆ ಭೌತಿಕ ಪ್ರಗತಿ ಸಾಧಿಸುವತ್ತ ವಿಶೇಷ ಗಮನ ನೀಡುವಂತೆ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಿ ನಾರಾಯಣಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು. ತುಮಕೂರು ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಮಧ್ಯಾಹ್ನ ಸುಮಾರು 12.30 ರ ಸಮಯದಲ್ಲಿ ತಾಲ್ಲೂಕು ಮಟ್ಟದ ಎಸ್‌ಸಿಎಸ್‌ಪಿ/ಟಿಎಸ್‌ಪಿ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಅಧಿಕಾರಿಗಳು ಈಗಾಗಲೇ ಮಂಜೂರಾಗಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಪ್ರಗತಿ ಸಾಧಿಸಲು ಸೂಚನೆ ನೀಡಿದರು.