ಶಿರಸಿ: ಇಂದಿರಾ ಕ್ಯಾಂಟೀನ್ ನಲ್ಲಿ ಉಪಹಾರ ಮತ್ತು ಊಟದ ಗುಣಮಟ್ಟ ಹೇಗಿದೆ ಎನ್ನುವುದನ್ನು ತಿಳಿಯುವುದಕ್ಕೋಸ್ಕರ ಶಿರಸಿ ಸಿದ್ದಾಪುರ ಕ್ಷೇತ್ರದ ಶಾಸಕರಾದ ಭೀಮಣ್ಣ ನಾಯ್ಕ ಅವರು ಶಿರಸಿ ಪಟ್ಟಣದಲ್ಲಿರುವ ಇಂದಿರಾ ಕ್ಯಾಂಟೀನ್ ಗೆ ಇಂದು ಮಂಗಳವಾರ ಮಧ್ಯಾಹ್ನ ಒಂದುವರೆ ಗಂಟೆ ಸುಮಾರಿಗೆ ಭೇಟಿ ನೀಡಿ ಮಧ್ಯಾಹ್ನದ ಊಟದ ಸವಿಯನ್ನು ಸವಿದರು. ಈ ಸಂದರ್ಭದಲ್ಲಿ ಇಂದಿರ ಕ್ಯಾಂಟೀನಿನ ಸಿಬ್ಬಂದಿಗಳಿಗೆ ಬೆಳಗಿನ ತಿಂಡಿ, ಮಧ್ಯಾಹ್ನ ಊಟ ಸರಿಯಾಗಿ ಇರಬೇಕು. ಗುಣಮಟ್ಟದ ಬಗ್ಗೆ ದೂರು ಬಂದರೆ ಸಹಿಸಲಾಗದು ಎಂದು ಎಚ್ಚರಿಸಿದರು.