ಭಾರೀ ಮಳೆಯಿಂದಾಗಿ ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳಲ್ಲಿ ಸಾಕಷ್ಟು ಹಾನಿಯಾಗಿದ್ದು, ಪ್ರತಿ ಗ್ರಾಮ ಮತ್ತು ಹೊಲಗಳಿಗೆ ಭೇಟಿ ನೀಡಿ ಸಮೀಕ್ಷೆಯನ್ನು ಅಚ್ಚುಕಟ್ಟಾಗಿ ನಡೆಸುವ ಮೂಲಕ ಬೆಳೆನಷ್ಟದಿಂದ ನೊಂದಿರುವ ಎಲ್ಲ ರೈತರಿಗೆ ಪರಿಹಾರ ಕಲ್ಪಿಸಲು ಪ್ರಮಾಣಿಕವಾಗಿ ಪ್ರಯತ್ನಿಸಬೇಕೆಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ತಾಲ್ಲೂಕು ಪಂಚಾಯತ ಕಛೇರಿ ಸಭಾಂಗಣದಲ್ಲಿ ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ನಡೆದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.