ಹಳಿಯಾಳ : ವಿಷ್ನ ವಿನಾಶಕ ಗಣಪತಿ ಹಬ್ಬದ ಪ್ರಯುಕ್ತ, ಹಳಿಯಾಳ ಪಟ್ಟಣದಲ್ಲಿರುವ ಶ್ರೀ ತುಳಜಾಭವಾನಿ ದೇವಸ್ಥಾನದಲ್ಲಿ ಚೌತಿ ಹಬ್ಬದ ನಿಮಿತ್ತ ವಿಶೇಷ ಪೂಜಾ ಕಾರ್ಯಕ್ರಮಗಳು ನಿನ್ನೆ ಬುಧವಾರದಿಂದ ಆರಂಭಗೊಂಡಿದೆ. ಗುರುವಾರ ಶ್ರೀ ದೇವಿಯ ದಿವ್ಯ ಸಾನಿಧ್ಯದಲ್ಲಿ ಗಣ ಹೋಮ ಹಾಗೂ ವಿಶೇಷ ಪೂಜಾ ಕಾರ್ಯಕ್ರಮವು ಶ್ರದ್ಧಾಭಕ್ತಿಯಿಂದ ಜರುಗಿತು. ಪೂಜಾ ಕಾರ್ಯಕ್ರಮವು ಗುರುವಾರ ಮಧ್ಯಾಹ್ನ 1:00 ಗಂಟೆ ಸುಮಾರಿಗೆ ಸಂಪನ್ನಗೊಂಡಿತು. ಪೂಜಾ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್ ವಿ ದೇಶಪಾಂಡೆ ಅವರು ಸೇರಿದಂತೆ ಅವರ ಕುಟುಂಬಸ್ಥರು ಭಾಗವಹಿಸಿದ್ದರು.