ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನೌಕರರ ಸಂಘದಿಂದ ಹಮ್ಮಿಕೊಂಡಿದ್ದ ಸಂಗೊಳ್ಳಿ ರಾಯಣ್ಣ ಜಯಂತಿ ಕಾರ್ಯಕ್ರಮದ ಮೆರವಣಿಗೆಯಲ್ಲಿ ಭಾನುವಾರ ಮಧ್ಯಾಹ್ನ 3ಗಂಟೆ ಸುಮಾರಿಗೆ ಶಾಸಕ ಅಶೋಕ ಮನಗೊಳಿ ಡೊಳ್ಳು ಬಾರಿಸಿ ನೃತ್ಯ ಮಾಡಿ ಗಮನ ಸೆಳೆದರು. ನಗರದ ಬಸವೇಶ್ವರ ವೃತ್ತದಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೂ ಹಮ್ಮಿಕೊಂಡಿದ್ದ ಮೆರವಣಿಗೆಯಲ್ಲಿ ಶಾಸಕರು ಡೊಳ್ಳು ಬಾರಿಸಿದರು. ಈ ಸಂದರ್ಭದಲ್ಲಿ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳ ಬಳಗ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.