ಪ್ರತಿ ವರ್ಷದಂತೆ ಈ ಬಾರಿಯು ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ) ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ, ಪೂಜಿಸಿದ ನಂತರ ಕೆರೆ/ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಇದರಿಂದಾಗಿ ನೈಸರ್ಗಿಕ ಜಲಮೂಲಗಳು ಕಲುಷಿತಗೊಂಡು ಇವುಗಳ ಭೌತಿಕ ಹಾಗೂ ರಾಸಾಯನಿಕ ಗುಣಗಳು ಮಾರ್ಪಟ್ಟು ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವುದಲ್ಲದೆ ಪ್ರಾಣಿ, ಪಕ್ಷಿ ಹಾಗೂ ಜಲಚರಗಳ ಜೀವನಕ್ಕೆ ಅಪಾಯವಾಗುತ್ತದೆ. ಅಲ್ಲದೆ ಸಾರ್ವಜನಿಕ ಆರೋಗ್ಯಕ್ಕೂ ದಕ್ಕೆ ಉಂಟಾಗುತ್ತದೆ. ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿಯು ಸದರಿ ಹಬ್ಬದ ಆಚರಣೆಯಿಂದ ನೈಸರ್ಗಿಕ ಜಲಮೂಲಗಳನ್ನು ರಕ್ಷಿಸುವ