ಕರುಣಾಮಯಿ ವಿಷ್ಣು ಅಭಿಮಾನಿ ಬಳಗದ ವತಿಯಿಂದ ಉದ್ಬೂರ್ ಗೇಟ್ ನಲ್ಲಿ ಇರುವ ಡಾಕ್ಟರ್ ವಿಷ್ಣುವರ್ಧನ್ ಸ್ಮಾರಕ ದಲ್ಲಿ ಸಾಹಸಸಿಂಹ ವಿಷ್ಣುವರ್ಧನ್ ರವರಿಗೆ ರಾಜ್ಯ ಸರ್ಕಾರ ನೀಡಿರುವ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿದ ಹಿನ್ನೆಲೆಯಲ್ಲಿ ಮಹಿಳಾ ಅಭಿಮಾನಿಗಳು ಸ್ವಯಂ ಪ್ರೇರಿತ ರಕ್ತದಾನ ಮಾಡುವ ಮೂಲಕ ಸ್ವಾಗತಿಸಿದರು ನಂತರ ಸಿಹಿ ಹಂಚಿ ಸಂಭ್ರಮಿಸಿದರು ಈ ಸಂದರ್ಭದಲ್ಲಿ ಮಾತನಾಡಿದ ಮಾಜಿನಗರ ಪಾಲಿಕಾ ಸದಸ್ಯ ಮಾ ವಿ ರಾಮ್ ಪ್ರಸಾದ್ ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರಿಗೆ ಹಾಗೂ ಬಹುಭಾಷಾ ತಾರೆ ಪದ್ಮಶ್ರೀ ಬಿ. ಸರೋಜಾ ದೇವಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರಕಟವಾಗಿರುವುದು ಅತ್ಯಂತ ಸಂತಸದ ಸಂಗತಿಯಾಗಿದೆ.