Download Now Banner

This browser does not support the video element.

ಸಿಂದಗಿ: ಪಟ್ಟಣದಲ್ಲಿ 5ಕೋಟಿ ರೂಪಾಯಿ ವೆಚ್ಚದ ಮಿನಿ ವಿಧಾನಸೌಧದ ಕಾಂಪೌಂಡ್ ಕಾಮಗಾರಿ ಭೂಮಿ ಪೂಜೆ ಮಾಡಿದ ಶಾಸಕ ಅಶೋಕ ಮನಗೂಳಿ

Sindgi, Vijayapura | Aug 25, 2025
ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಸುಮಾರು 5 ಕೋಟಿ ರೂಪಾಯಿ ವೆಚ್ಚದ ಮಿನಿ ವಿಧಾನಸೌಧದ ಕಾಂಪೌಂಡ್ ನಿರ್ಮಾಣ ಕಾಮಗಾರಿ ಭೂಮಿ ಪೂಜೆಯನ್ನು ಸೋಮವಾರ ಮಧ್ಯಾಹ್ನ 1ಗಂಟೆ ಸುಮಾರಿಗೆ ಶಾಸಕ ಅಶೋಕ ಮನಗೂಳಿ ನೆರವೇರಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಮಿನಿವಿಧಾನಸೌಧದ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದ್ದು ಕಾಂಪೌಂಡ್ ಕಾಮಗಾರಿಯನ್ನು ಗುತ್ತಿಗೆದಾರರು ಆದಷ್ಟು ಬೇಗ ಪೂರ್ಣಗೊಳಿಸಿ ಆಡಳಿತಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
Read More News
T & CPrivacy PolicyContact Us