ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕವಿತಾಳ ಪಟ್ಟಣದಲ್ಲಿ ಮುಖ್ಯ ರಸ್ತೆ ಹದಗೆಟ್ಟು ರಸ್ತೆ ಎಲ್ಲ ಕೆಸರು ಗದ್ದೆಯಂತಾಗಿದೆ ಎಂದು ಭೀಮ್ ಆರ್ಮಿ ಸಂಘಟನೆಯ ಮುಖಂಡರು ರಸ್ತೆಯಲ್ಲಿಯೇ ಭತ್ತದ ಸಸಿ ನೆಟ್ಟು ಪ್ರತಿಭಟನೆ ನಡೆಸಿ ರಸ್ತೆ ದುರಸ್ತಿಗೆ ಆಗ್ರಹಿಸಿದ್ದಾರೆ. ಗುರುವಾರ ಮಧ್ಯಾಹ್ನ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಂಘಟನೆಯ ಹೋಬಳಿ ಘಟಕದ ಅಧ್ಯಕ್ಷ ಅಜ್ಜಪ್ಪ ಬುಳ್ಳಾಪುರ ಮಾತನಾಡಿ, ಪಟ್ಟಣದಲ್ಲಿ ರಸ್ತೆಗಳು ಹಾಳಾಗಿದ್ದರಿಂದ ಸಾರ್ವಜನಿಕರ ಹೋರಾಟಕ್ಕೆ ತುಂಬಾ ತೊಂದರೆ ಉಂಟಾಗಿದೆ ಅಧಿಕಾರಿಗಳು ನಿರ್ಲಕ್ಷದಿಂದ ಸಾರ್ವಜನಿಕರು ತೊಂದರೆ ಪಡುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದರು.