ಯೋಜನಾ ಸಮಿತಿ ಸದಸ್ಯರ ಆಯ್ಕೆಗೆ ಚುನಾವಣೆ ವೇಳಾಪಟ್ಟಿ ಪ್ರಕಟಿಸಿ ಜಿಲ್ಲಾ ಪಂಚಾಯತ್ ನ ಸಿಇಒ ಪ್ರಕಟಣೆ ನೀಡಿದ್ದಾರೆ. ಇನ್ನೂ ಮಂಗಳವಾರ ಸಂಜೆ 5 ಗಂಟೆಗೆ ಈ ಬಗ್ಗೆ ಇಲಾಖೆ ಮಾಹಿತಿ ನೀಡಿದೆ. ಇನ್ನೂ ಚಿತ್ರದುರ್ಗ ಜಿಲ್ಲಾ ಯೋಜನಾ ಸಮಿತಿಗೆ ನಗರ ಸ್ಥಳೀಯ ಸಂಸ್ಥೆಗಳಿಂದ 11 ಸದಸ್ಯರ ಆಯ್ಕೆಗೆ ಚುನಾವಣೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ನಗರ ಸ್ಥಳೀಯ ಕ್ಷೇತ್ರದಲ್ಲಿ ಒಟ್ಟು 168 ಮತದಾರರು ಇದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಚುನಾವಣೆ ಕಾರ್ಯಗಳು ನಡೆಯಲಿವೆ