ಬೈಕ್ ಹಾಗೂ ಸ್ಕೂಲ್ ಬಸ್ ನಡುವೆ ಅಪಘಾತ ಬೈಕ್ ಸವಾರನಿಗೆ ಗಂಭೀರ ಗಾಯ ಸ್ಕೂಲ್ ಬಸ್ ಹಾಗು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸಮರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಕೋಲಾರ ತಾಲೂಕಿನಲ್ಲಿ ನಡೆದಿದೆ ಕೋಲಾರ ತಾಲೂಕಿನ ತೊಟ್ಲಿ ಗ್ರಾಮದ ಸಮೀಪ ಬುಧವಾರ ಬೆಳಗ್ಗೆ 10 ಗಂಟೆಯಲ್ಲಿ ಅಪಘಾತ ನಡೆದಿದ್ದು ಗಾಯಗೊಂಡ ವ್ಯಕ್ತಿಯನ್ನು ಚೋಳಘಟ್ಟ ಗ್ರಾಮದ ಶಿವಕುಮಾರ್ ಅಲಿಯಾಸ್ ಊರ ಭಾವ ಎಂದು ಗುರುತಿಸಲಾಗಿದೆ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ