ಹುಬ್ಬಳ್ಳಿ: ಕಟ್ಟಡ ಕಾರ್ಮಿಕರಿಗೆ ಸಿಗುವಂತಹ ಎಲ್ಲ ಸೌಲಭ್ಯಗಳನ್ನು ಆಟೋ ಚಾಲಕ ಕಾರ್ಮಿಕರಿಗೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರ ಸಂಘ ನಗರದಲ್ಲಿಂದು ಪ್ರತಿಭಟನೆ ನಡೆಸಿತು. ನಗರದ ತಹಶಿಲ್ದಾರ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಸಂಘದ ಸದಸ್ಯರು, ಆಟೋ ಚಾಲಕರಿಗೆ ಆಶ್ರಯ ಮನೆ ನೀಡಬೇಕು. ಆಟೋ ಚಾಲಕರ ಮಕ್ಕಳಿಗೆ ಉಚಿತ ಶಿಕ್ಷಣ ನೀಡಬೇಕು. ವಿದ್ಯಾರ್ಥಿ ವೇತನ ನೀಡಬೇಕು. ಆಟೋ ರಿಕ್ಷಾ ಚಾಲಕರ ದಿನಾಚರಣೆ ಘೋಷಣೆ ಮಾಡಬೇಕು ಇದಲ್ಲದೇ ಇನ್ನಿತರ ಬೇಡಿಕೆ ಈಡೇರಿಸಬೇಕೆಂದು ತಹಶಿಲ್ದಾರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಘದ ರಾಜ್ಯಾಧ್ಯಕ್ಷ ಶೇಖರಯ್ಯ ಮಠಪತಿ, ಪ್ರದಾನ ಕಾರ್ಯದರ್ಶಿ ಜೀವನ ಉತ್ಕುರಿ ಸೇರಿದಂತೆ ಇದ್ದರು.