ಕ್ಷುಲ್ಲಕ ಕಾರಣಕ್ಕೆ ಹೋಟೆಲ್ ಸಿಬ್ಬಂದಿಗೆ ಗ್ರಾಹಕನೊಬ್ಬ ಚಾಕುವಿನಿಂದ ಇರಿದು ಗಾಯಗೊಳಿಸಿದ ಘಟನೆ ನಗರದ ಸ್ಟೇಶನ್ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ನಡೆದಿದೆ. ಹೋಟೆಲ್ ಸಿಬ್ಬಂದಿ ಅಜಯ ಪಿ. ಎಂಬಾತನ ಜತೆ ಊಟ ನೀಡುವ ವಿಚಾರಕ್ಕೆ ಜಗಳ ತೆಗೆದ ಗೋವಾದ ಜಾನ್‌ವಿಲಿಮ್ ಡಿ. ಎಂಬಾತ ಸಿಟ್ಟಿನಲ್ಲಿ ಚಾಕುವಿನಿಂದ ಇರಿದಿದ್ದಾನೆ. ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.