ಹೆಣ್ಣು ಮಕ್ಕಳ ಜರ್ಕಿನ್ ಹಾಕಿಕೊಳ್ಳಬೇಡ ಎಂದು ಬುದ್ಧಿ ಹೇಳಿದ್ದಕ್ಕೆ ಅದನ್ನೇ ಮನಸ್ಸಿನಲ್ಲಿ ಇಟ್ಟುಕೊಂಡು ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬ್ಯಾಡಗಿ ತಾಲೂಕು ಹೊಸ ಶಿಡೇನೂರು ಗ್ರಾಮದ ಅಬ್ದುಲ್ ರೆಹಮಾನ್ ಶರೀಫ ಸಾಬ್ ಯಲವಿಗಿ (27) ಮೃತ ದುರ್ದೈವಿ. ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.