ಚಾಮರಾಜನಗರದಲ್ಲಿ ರೋಟರಿ ಸಂಸ್ಥೆ ವತಿಯಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ ಬಹಳ ಯಶಸ್ವಿಯಾಗಿ ನಡೆಯಿತು. ನಗರದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿರುವ ರೋಟರಿ ಭವನದಲ್ಲಿ ರೋಟರಿ ಸಂಸ್ಥೆ, ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ, ಅರವಿಂದ ಕಣ್ಣಿನ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಉಚಿತ ಕಣ್ಣಿನ ತಪಾಸಣೆ ಶಿಬಿರದಲ್ಲಿ 291 ಮಂದಿ ತಪಾಸಣೆ ಮಾಡಿಸಿಕೊಂಡರು. 198 ಮಂದಿ ಶಸ್ತ್ರಚಿಕಿತ್ಸೆಗೆ ಆಯ್ಕೆಯಾಗಿದ್ದು, ಅವರನ್ನು ಕೊಯಮತ್ತೂರಿನ ಅರವಿಂದ ಕಣ್ಣಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಶಿಬಿರದಲ್ಲಿ ವ್ಯವಸ್ಥೆ ಮಾಡಲಾಯಿತು.