ಹುಲಿ ದಾಳಿ ನಡೆಸಿ ಹಸುವನ್ನು ಕೊಂದು ಹಾಕಿರುವ ಘಟನೆ ಗುಂಡ್ಲುಪೇಟೆ ಪಟ್ಟಣದ ವಿಜಯಪುರ ಅಮಾನಿಕೆರೆ ತಪ್ಪಲಿನಲ್ಲಿ ನಡೆದಿದೆ. ಗುಂಡ್ಲುಪೇಟೆ ಪಟ್ಟಣದ ನಾಗರಾಜನಾಯಕ ಎಂಬುವವರಿಗೆ ಸೇರಿದ ಹಸು ಇದಾಗಿದ್ದು, ಕೆರೆ ಅಂಗಳದಲ್ಲಿ ಮೇವು ಮೇಯಲು ಬಿಟ್ಟಿದ್ದ ವೇಳೆ ಹುಲಿ ಏಕಾಏಕಿ ದಾಳಿ ನಡೆಸಿ ಕೊಂದು ಹಾಕಿದೆ. ಇದರಿಂದ ಮಾಲೀಕರಿಗೆ ಅಪಾರ ನಷ್ಟ ಉಂಟಾಗಿದೆ. ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.