ಹನೂರು: ತಾಲೂಕಿನ ಪರಮಪೂಜ್ಯ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 110ನೇ ಜಯಂತಿಯನ್ನು ಹನೂರು ತಾಲೂಕಿನ ರಾಮಾಪುರ ಗ್ರಾಮದಲ್ಲಿ ಭಕ್ತಿ, ಭಾವನೆ ಹಾಗೂ ವಿಜೃಂಭಣೆಯೊಂದಿಗೆ ಆಚರಿಸಲಾಯಿತು. ಗ್ರಾಮದ ಜೆ.ಎಸ್.ಎಸ್. ಶಿಕ್ಷಣ ಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ, ಶ್ರೀಗಳ ಭಾವಚಿತ್ರ ವಿವಿಧ ಪುಷ್ಟಗಳಿಂದ ಸಿಂಗರಿಸಿದ್ದ ತೆರದ ವಾಹನದಲ್ಲಿ ಮೆರವಣಿಗೆ ನೆಡೆಸಲಾಯಿತು ಮೆರವಣಿಗೆಯೂ ಗ್ರಾಮದ ಮುಖ್ಯ ರಸ್ತೆ ಹಾಗೂ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಭಕ್ತರಲ್ಲಿ ಉತ್ಸಾಹ ಮೂಡಿಸಿತು. ಈ ವೇಳೆ ಶಾಲಾ ಮಕ್ಕಳು, ವಾದ್ಯ ಮೇಳ ಹಾಗೂ ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ಪಾಲ್ಗೊಂಡು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು. ವಿದ್ಯಾರ್ಥಿಗಳ ಸಾಂಸ್ಕೃತಿಕ ಪ್ರದರ್ಶನವು ಜನರ ಗಮನ ಸೆಳೆಯಿತು.