ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ದೇಸಾಯಿ ಭೋಗಾಪುರ ಗ್ರಾಮದಲ್ಲಿ ಪತಿ ಎಲ್ಲಪ್ಪ ತನ್ನ ಪತ್ನಿಯನ್ನು ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ ಎಂದು ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟ ಮಾದಯ್ಯ ಅವರು ತಿಳಿಸಿದ್ದಾರೆ. ಭಾನುವಾರ ಮಧ್ಯಾನ ಲಿಂಗಸುಗೂರು ಪಟ್ಟಣದಲ್ಲಿ ಈ ಕುರಿತು ಹೇಳಿಕೆ ನೀಡಿ, ಪತ್ನಿಯ ಮೇಲೆ ಅನುಮಾನಗೊಂಡಿದ್ದರಿಂದ ಕೊಲೆ ಮಾಡಿದ್ದಾನೆ ಎನ್ನುವ ವಿಷಯ ಮೇಲ್ನೋಟಕ್ಕೆ ತಿಳಿದು ಬರುತ್ತಿದ್ದು, ಮಸ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.