ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಾಯಂಕಾಲ 4ಗಂಟೆ ಸುಮಾರಿಗೆ ಜಿಲ್ಲಾಧಿಕಾರಿ ಆನಂದ.ಕೆ ನೇತೃತ್ವದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಆರೋಗ್ಯ ಇಲಾಖೆಯ ಗರ್ಭಿಣಿಯರಿಗೆ ಸಲ್ಲುವ ಸವಲತ್ತುಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಇದರ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.