ಉತ್ತರ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಶನಿವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಒಟ್ಟು 36,728 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ ಎಂದು ಶನಿವಾರ ಸಂಜೆ 6ಕ್ಕೆ ಜಿಲ್ಲಾ ನ್ಯಾಯಾಲಯ ಮಾಹಿತಿ ನೀಡಿದೆ. ಈ ಪೈಕಿ 31,526 ವ್ಯಾಜ್ಯ ಪೂರ್ವ ಪ್ರಕರಣಗಳು ಮತ್ತು ನ್ಯಾಯಾಲಯದಲ್ಲಿ ಬಾಕಿ ಇದ್ದ 5,202 ಪ್ರಕರಣಗಳು ಸೇರಿವೆ. ಈ ಅದಾಲತ್ನಲ್ಲಿ ರಾಜಿ ಮಾಡಿಕೊಂಡ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 37.70 ಕೋಟಿ ರೂ. ಹಣ ಸಂಗ್ರಹ ಮತ್ತು ಪಾವತಿಯಾಗಿದೆ.