ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಕರ ಪಾತ್ರ ಅಪಾರ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಹೇಳಿದ್ದಾರೆ. ನಗರದ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಇವರ ವತಿಯಿಂದ ಶುಕ್ರವಾರ ನಡೆದ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪ್ರಧಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರುಗುರುಗಳಿಲ್ಲದಿದ್ದರೆ ಸಮಾಜದ ಸ್ಥಿತಿಗತಿಗಳು ಬೆರಡೆಯೇ ಸಾಗುತ್ತಿತ್ತು, ಗುರುವಿಂದಲೆ ಕೆಡಕುಗಳು ಮರೆಯಾಗಿ ಒಳಿತಾಗುತ್ತಿರುವುದು. ಆದುದರಿಂದಲೇ ಪ್ರತಿಯೊಬ್ಬರ ಜೀವನದಲ್ಲಿಯೂ ಗುರು ಮಹತ್ವ ಪೂರ್ಣವಾಗಿದ್ದಾರೆ ಎಂದು ಗುರುವಿನ ಮಹತ್ವ ವಿವರಿಸಿದರು.ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳ