ಗ್ರಾಮೀಣ ಜನರಲ್ಲಿರುವ ಕ್ರೀಡಾ ಪ್ರತಿಭೆ ಹೊರ ತರಲು ದಸರಾ ಕ್ರೀಡಾಕೂಟ ಸೂಕ್ತ ವೇದಿಕೆ ಎಂದು ಶಾಸಕ ಎಚ್.ಎಂ.ಗಣೇಶ್‍ಪ್ರಸಾದ್ ಅಭಿಪ್ರಾಯ ಪಟ್ಟರು. ಪಟ್ಟಣದ ಡಿ.ದೇವರಾಜ ಅರಸು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ದಸರಾ ಕ್ರೀಡಾಕೂಟ ಉದ್ಘಾಟನಾ ಸಮಾರಂಭದಲ್ಲಿ ಸೋಮವಾರ ಮಧ್ಯಾಹ್ನ ಪಾಲ್ಗೊಂಡು ಮಾತನಾಡಿದರು. ದಸರಾ ಕ್ರೀಡಾಕೂಟದಲ್ಲಿ ವಯಸ್ಸಿನ ಬೇಧವಿಲ್ಲದೇ ಎಲ್ಲರಿಗೂ ಪ್ರವೇಶ ಮುಕ್ತವಾಗಿರುತ್ತದೆ. ಇದರಿಂದ ಹೆಚ್ಚಿನ ಮಂದಿ ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ಜಿಲ್ಲಾ ಮತ್ತು ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾಗುವ ಅವಕಾಶ ಆಗುತ್ತದೆ. ಸ್ಪರ್ಧೆಗಳು ಇದ್ದಾಗ ಗೆಲುವಿಗೆ ಹೆಚ್ಚಿನ ಮಹತ್ವ ಬರುತ್ತದೆ ಎಂದರು.