ಸಹೋದರನ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಯುವತಿಯ ಮೇಲೆ ಖಾಸಗಿ ಬಸ್ ಹರಿದು ಯುವತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸೋಮವಾರ ಶಿವಮೊಗ್ಗ ನಗರದ ಹೊರವಲಯದ ದುಮ್ಮಳ್ಳಿ ಕ್ರಾಸ್ ನ ಸಕ್ಕರೆ ಫ್ಯಾಕ್ಟರಿ ಬಳಿ ನಡೆದಿದೆ. ಸಹೋದರ ಸಂತೋಷ್ ಜೊತೆ ಕವಿತಾ ಬೈಕ್ ನಲ್ಲಿ ತೆರಳುತ್ತಿದ್ದಾಗ ಎದುರಿಗೆ ಮತ್ತೊಂದು ಬೈಕ್ ಅಡ್ಡ ಬಂದ ಪರಿಣಾಮ ಅಪಘಾತ ಸಂಭವಿಸಿದ್ದು ಬೈಕ್ ರಸ್ತೆ ಮಧ್ಯೆ ಬಿದ್ದಿದ್ದಾರೆ. ಏಕಾಏಕಿ ಬಂದಂತಹ ಖಾಸಗಿ ಬಸ್ ಹರಿದು ಕವಿತಾ ಸ್ಥಳದಲ್ಲಿ ಪಶ್ಚಿಮ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.