ಕಲಬುರಗಿ : ಕಲಬುರಗಿ ನಗರದ ಮಾತೋಶ್ರೀ ಸಾವಿತ್ರೀಬಾಯಿ ಫುಲೆ ಬಡಾವಣೆಗೆ ಕುಡಿಯುವ ನೀರು, ರಸ್ತೆ, ಚರಂಡಿ, ಸಾರ್ವಜನಿಕ ಉದ್ಯಾನವನ, ಗ್ರಂಥಾಲಯ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳನ್ನ ಒದಗಿಸುವಂತೆ ಆಗ್ರಹಿಸಿ ಶಾಸಕ ಅಲ್ಲಮಪ್ರಭು ಪಾಟೀಲ್ ನಿವಾಸದ ಬಳಿ ಬಹುಜನ ಹೋರಾಟ ಸಮಿತಿ ನೇತೃತ್ವದಲ್ಲಿ ನಿವಾಸಿಗಳು ಪ್ರತಿಭಟನೆ ನಡೆಸಿದ್ದಾರೆ.. ಆಗಷ್ಟ್ 29 ರಂದು ಮಧ್ಯಾನ 1 ಗಂಟೆಗೆ ಶಾಂತಿನಗರದ ದಕ್ಷಿಣ ಕ್ಷೇತ್ರದ ಶಾಸಕರ ಮನೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.. ಕಳೆದ ಅನೇಕ ವರ್ಷಗಳಿಂದ ಬಡಾವಣೆಯಲ್ಲಿ ಮೂಲಭೂತ ಸೌಕರ್ಯಗಳು ಇಲ್ಲದೇ ನಿವಾಸಿಗಳು ನರಕಯಾತನೆ ಅನುಭವಿಸುತ್ತಿದ್ದು, ಇದುವರೆಗೆ ನಮ್ಮ ಸಮಸ್ಯೆಗಳಿಗೆ ಸ್ಪಂದಿಸಿಲ್ಲವೆಂದು ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.