ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಹಿನ್ನಲೆ ಸೆ.6 ರಂದು ನಾಳೆ ಶಿವಮೊಗ್ಗ ನಗರದ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ಇರುವ ಕಾರಣ ನಾಳೆ ನಗರದ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಸದರಿ ರಜೆಯನ್ನು ಮುಂದಿನ ದಿನಗಳಲ್ಲಿ ಸರಿದೂಗಿಸಿಕೊಳ್ಳಲು ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ನಾಯ್ಕ್ ಸೂಚಿಸಿ, ಶಿವಮೊಗ್ಗ ನಗರ ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಶುಕ್ರವಾರ ಸಂಜೆ 6:30 ಕ್ಕೆ ತಿಳಿಸಿದ್ದಾರೆ.