ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದಲ್ಲಿರುವ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಸೋಮವಾರ ಬೆಳಗ್ಗೆ 11:45 ಕ್ಕೆ ದಿಡೀರ್ ಭೇಟಿ ನೀಡಿದರು. ಆಸ್ಪತ್ರೆಯ ಸ್ಥಿತಿ ಗತಿಯನ್ನ ಪರಿಶೀಲಿಸಿದ ದಿನೇಶ್ ಗುಂಡೂರಾವ್ ಬಳಿಕ ಮಧ್ಯಾಹ್ನ 12:20ಕ್ಕೆ ಬೀರೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭೇಟಿಯನ್ನು ನೀಡಿ ಆಸ್ಪತ್ರೆಯನ್ನು ಇನ್ನಷ್ಟು ಉತ್ತಮ ಸ್ಥಿತಿಯಲ್ಲಿ ಇಡುವಂತೆ ಸೂಚನೆಯನ್ನು ಕೊಟ್ಟರು ಈ ಸಂದರ್ಭದಲ್ಲಿ ಶಾಸಕ ಆನಂದ್ ಉಪಸ್ಥಿತರಿದ್ದು ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ಮಾಹಿತಿ ಕೊಟ್ಟರು.