ಒಳಮೀಸಲಾತಿ ಹೆಸರಿನಲ್ಲಿ ಲಂಬಾಣಿ, ಭೋವಿ, ಕೊರಚ, ಕೊರಮ ಸಮುದಾಯಗಳ ಜೊತೆಗೆ 63 ಜಾತಿಗಳನ್ನು ಸೇರಿಸಿ, ಶೇ.5 ಮೀಸಲಾತಿ ನೀಡಿ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿ ವಿಜಯಪುರ ನಗರದಲ್ಲಿ ಶನಿವಾರ ಮಧ್ಯಾಹ್ನ 2ಗಂಟೆ ಸುಮಾರಿಗೆ ಲಂಬಾಣಿ, ಬೋವಿ, ಕೊರಚ, ಕೊರಮ, ಸಮುದಾಯಗಳು ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಸಿದ್ದೇಶ್ವರ ದೇವಸ್ಥಾನದಿಂದ ಅಂಬೇಡ್ಕರ್ ವೃತ್ತದವರೆಗೂ ಮೆರವಣಿಗೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಇವರ ಭಾವಚಿತ್ರಗಳನ್ನು ಹಿಡಿದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಹಂದಿಗಳನ್ನು ಹಿಡಿಯುವ ಬಲೆಯಲ್ಲಿ ಡಿಸಿಎಂ ಹಾಗೂ ಸಿಎಂ ಭಾವಚಿತ್ರಗಳನ್ನು ಹಾಕಿ ಪ್ರತಿಭಟಿಸಿದರು. ಪ್ರತಿಭಟನೆಯಲ್ಲಿ ಹಂದಿಮರಿಗಳನ್ನು ಹಾಗೂ ತಲೆಯ ಮೇಲೆ ಚಪ್ಪಲಿಗಳನ್ನು ಹೊತ್ತು ಕಿಡಿಕಾರಿದರು.