ರಾಜ್ಯದ ಯಾವುದೇ ಭಾಗದಲ್ಲಿ ಅನ್ಯಾಯವಾದರೂ ಅದನ್ನು ಸರಿಪಡಿಸುವ ಕೆಲಸ ಮಾಡುತ್ತಿದ್ದೇನೆ. ನನಗೆ ಜೀವ ಬೆದರಿಕೆ ಇದೆ. ಆದರೂ ಯಾವುದಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ರಾಜ್ಯ ಉಪಲೋಕಾಯುಕ್ತ ನ್ಯಾ.ಬಿ.ವೀರಪ್ಪ ಹೇಳಿದರು. ತಾಲೂಕಿನ ಮಿಟ್ಟಿ ಮಲ್ಕಾಪುರ ಗ್ರಾಮದಲ್ಲಿ ಕಲ್ಲು ಗಣಿಗಾರಿಕೆಯಲ್ಲಿ ನಿಯಮ ಉಲ್ಲಂಘನೆ ನಡೆದಿದೆ ಎಂಬ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ, ಸುಮೊಟೋ ಕೇಸ್ ದಾಖಲಿಸಿ ಆಗಸ್ಟ್ 30 ರ ಶನಿವಾರ ಮಧ್ಯಾಹ್ನ 3 ಗಂಟೆಗೆ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ರಾಜ್ಯದ ಎಲ್ಲ ಜಿಲ್ಲೆಗಳ ಸಂಚಾರ ಮಾಡುತ್ತಿದ್ದೇನೆ. ನನಗೆ 65 ವರ್ಷವಾಗಿದೆ. ಜೀವ ಬೆದರಿಕೆ ಸಾಕಷ್ಟಿದೆ. ಅದಕ್ಕೆ ತಲೆಕೆಡಿಸಿಕೊಳ್ಳುವುದಿಲ್ಲ. ಬೆದರಿಕೆ ಇರುವುದರಿಂದ ಪಿಸ್ತೂಲ್ ತಗೊಂಡಿದ್ದೇನೆ,