ಸಿಂಧನೂರು ಪಟ್ಟಣದ ಸರ್ಕಾರಿ ಆಸ್ಪತ್ರೆ ಸೇರಿದಂತೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರನ್ನ ನೇಮಿಸುವಂತೆ ಸಿಪಿಎಂಎಲ್ ರೆಡ್ ಸ್ಟಾರ್ ಪಕ್ಷದ ರಾಜ್ಯ ಕಾರ್ಯದರ್ಶಿ ಗಂಗಾಧರ ಒತ್ತಾಯಿಸಿದ್ದಾರೆ. ಶುಕ್ರವಾರ ಸಂಜೆ ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ಈ ಕುರಿತು ಹೇಳಿಕೆ ನೀಡಿ, ಆಸ್ಪತ್ರೆಯಲ್ಲಿ ಸರಿಯಾಗಿ ವೈದ್ಯರು ಇಲ್ಲದ ಕಾರಣ ಬಡ ಜನರು ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಹೋಗಬೇಕಾದ ಪರಿಸ್ಥಿತಿ ಎದುರಾಗಿದೆ. ಆಸ್ಪತ್ರೆಗಳಲ್ಲಿ ವೈದ್ಯರನ್ನು ನೇಮಿಸಬೇಕು ಮತ್ತು ಔಷಧಿ ಸಂಗ್ರಹ ಮಾಡಿಕೊಳ್ಳಲು ಕ್ರಮ ಕೈಗೊಳ್ಳಬೇಕು ಅಂದಾಗ ಸರ್ಕಾರ ಜನರಿಗೆ ಸೇವೆ ಮಾಡಿದಂತಾಗಲಿದೆ ಎಂದು ಅಗ್ರಹಿಸಿದರು.