ಜಾತಿ ಸಮೀಕ್ಷೆಯನ್ನು ವಿರೋಧ ಮಾಡುತ್ತಿರುವ ಬಿಜೆಪಿಯ ಪ್ರಹ್ಲಾದ್ ಜೋಶಿ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರಿಗೆ ದಲಿತರು ಹಾಗೂ ಹಿಂದುಳಿದವರ ಅಭಿವೃದ್ಧಿಯಾಗುವುದು ಬೇಕಾಗಿಲ್ಲ. ಹೀಗಾಗಿ ಸಮೀಕ್ಷೆಯನ್ನು ವಿರೋಧ ಮಾಡುತ್ತಿದ್ದಾರೆ. ಆರ್ಥಿಕವಾಗಿ ಶೈಕ್ಷಣಿಕವಾಗಿ ಹಿಂದುಳಿದವರ ಸಮೀಕ್ಷೆಯನ್ನು ಮಾಡಿ ಅಂಕಿ ಅಂಶಗಳ ಮೂಲಕ ಯೋಜನೆಗಳನ್ನು ರೂಪಿಸಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ, ಆದರೆ ಬಿಜೆಪಿಯವರು ಇದನ್ನ ವಿರೋಧ ಮಾಡುತ್ತಿದ್ದಾರೆ ಎಂದು ಕೊಪ್ಪಳದಲ್ಲಿ ಸಚಿವ ಶಿವರಾಜ್ ತಂಗಡಗಿ ಕಿಡಿ ಕಾರಿದ್ದಾರೆ