ಕೊಳ್ಳೇಗಾಲ: ಚಿಕ್ಕಲ್ಲೂರು ಅರಣ್ಯ ಪ್ರದೇಶದಲ್ಲಿ ಜಿಂಕೆಯನ್ನು ಕಡಿದು ಮಾಂಸ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಬಂಧಿತನನ್ನು ತೆಳ್ಳನೂರು ಗ್ರಾಮದ ಮಾದೇಶ್ ಎಂದು ಗುರುತಿಸಲಾಗಿದೆ. ಇದೇ ಗ್ರಾಮದ ಮುತ್ತುರಾಜ್ ಎಂಬುವವರು ಪರಾರಿಯಾಗಿದ್ದಾರೆ. ಈ ವೇಳೆ ಮಾದೇಶ್ ಅವರಿಂದ ಜಿಂಕೆ ಮಾಂಸ ಹಾಗೂ ಉಪಯೋಗಿಸಿದ ಬೈಕ್ ಅನ್ನು ಜಪ್ತಿ ಮಾಡಿದ್ದಾರೆ. ಮಾದೇಶ್ ಮತ್ತು ಮುತ್ತುರಾಜ್ ಚಿಕ್ಕಲ್ಲೂರು ಅರಣ್ಯ ಪ್ರದೇಶದಲ್ಲಿ ನಾಯಿಗಳು ಜಿಂಕೆಯ ಮೇಲೆ ದಾಳಿ ಮಾಡುತ್ತಿದ್ದ ದೃಶ್ಯವನ್ನು ನೋಡಿ, ನಾಯಿಗಳನ್ನು ಓಡಿಸಿ, ಜಿಂಕೆಯನ್ನು ಕೊಂದು ಮಾಂಸವನ್ನು ಪಾಲು ಮಾಡಿಕೊಂಡು ಸಾಗಿಸುತ್ತಿದ್ದ ವೇಳೆ, ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ