ಚಳ್ಳಕೆರೆ:ತಾಲೂಕಿನ ಬಾಲೇನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರ ಮಳೆಗಾಲದಲ್ಲಿ ಸೋರುತ್ತಿರುವುದರಿಂದ ಮಕ್ಕಳ ಕಲಿಕೆಗೆ ತೀವ್ರ ತೊಂದರೆ ಆಗುತ್ತಿದೆ ಅಷ್ಟೇ ಅಲ್ಲದೆ ಕೆಲವು ಕಡೆ ಗೋಡೆ ಬಿರುಕು ಬಿಟ್ಟಿದ್ದು ಅಂಗನವಾಡಿ ಕಟ್ಟಡ ಮಕ್ಕಳಿಗೆ ಜೀವಕ್ಕೆ ಕಂಟಕವಾಗಿದೆ ಅಂಗನವಾಡಿ ಕೇಂದ್ರದಲ್ಲಿ ೩೦ ಕ್ಕೂ ಹೆಚ್ಚು ಮಕ್ಕಳ ದಾಖಲಾಗಿದ್ದಾರೆ. ಮಳೆಗಾಲದಲ್ಲಿ ಸುರಕ್ಷತೆ ಇಲ್ಲ. ಇದರಿಂದ ಮಕ್ಕಳನ್ನು ಅಂಗನವಾಡಿ ಕೇಂದ್ರಕ್ಕೆ ಕಳುಹಿಸಲು ಪೋಷಕರು ಹಿಂದೇಟು ಹಾಕುತ್ತಾರೆ. ಮಕ್ಕಳ ಸುರಕ್ಷತೆ ಮತ್ತು ಅಡುಗೆ ಸಾಮಗ್ರಿಗಳನ್ನು ಪೋಷಣೆ ಮಾಡಿಕೊಳ್ಳುವುದು ಕಷ್ಟವಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿ ಕಟ್ಟಡ ರಿಪೇರಿ ಮಾಡಬೇಕೆಂದು ಈಗಾಗಲೇ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಲಾಗಿತ್ತು.