ಹಾಸನ: ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ದ ನಡೆಯುತ್ತಿರುವ ಅಪ ಪ್ರಚಾರ, ಷಡ್ಯಂತ್ರ ಹಾಗೂ ಸುಳ್ಳು ಆರೋಪಗಳ ವಿರುದ್ದ ಜೆಡಿಎಸ್ ವತಿಯಿಂದ ಆ.31 ರಂದು ಬೆಳಗ್ಗೆ ಧರ್ಮಸ್ಥಳ ಸತ್ಯಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಎಸ್.ಲಿಂಗೇಶ್ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳ ಬಗ್ಗೆ ಅಪ ಪ್ರಚಾರ ಖಂಡಿಸಿ ನಮ್ಮ ನಾಯಕರಾದ ದೇವೇಗೌಡರು, ಕುಮಾರಣ್ಣ, ರೇವಣ್ಣ ಅವರ ಮಾರ್ಗದರ್ಶನದಲ್ಲಿ ನಿಖಿಲ್ ಕುಮಾರ್ ಅವರ ನೇತೃತ್ವದಲ್ಲಿ ಯಾತ್ರೆ ನಡೆಯಲಿದ್ದು, ಸುಮಾರು 10 ಸಾವಿರ ಮಂದಿ ಹಾಸನದಿಂದ ಕಾರುಗಳಲ್ಲಿ ಧರ್ಮಸ್ಥಳಕ್ಕೆ ತೆರಳಿ ಡಾ.ವೀರೇಂದ್ರ ಹೆಗ್ಗಡೆ ಅವರಿಗೆ ಬಲ ತುಂಬಿ ಬರುತ್ತೇವೆ ಎಂದು ತಿಳಿಸಿದರು.