ಸರಕಾರದ ಪಡಿತರ ಅಕ್ಕಿಯನ್ನು ಖಾಸಗಿ ಕಟ್ಟಡದಲ್ಲಿ ಅಕ್ರಮ ದಾಸ್ತಾನಿರಿಸಲಾಗಿದ್ದ ಸ್ಥಳಕ್ಕೆ ಆಹಾರ ಇಲಾಖಾಧಿಕಾರಿಗಳು ದಾಳಿ ನಡೆಸಿ ಇಬ್ಬರ ವಿರುದ್ದ ಪ್ರಕರಣ ದಾಖಲಿಸಿಕೊಂಡ ಘಟನೆ ಗೋಳ್ತಮಜಲು ಗ್ರಾಮದ ಕಲ್ಲಡ್ಕ ಸಮೀಪದ ಪಟ್ಟೆಕೋಡಿ ಎಂಬಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕಲ್ಲಡ್ಕ ನಿವಾಸಿಗಳಾದ ಗೋಡೌನ್ ನಿರ್ವಾಹಕ ಉಮ್ಮರಬ್ಬ ಯಾನೆ ಪುತ್ತುಮೋನು (47) ಹಾಗೂ ಕೆಲಸಗಾರ ರಫೀಕ್ (42) ಎಂಬವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ