ಅಂಕೋಲಾ ತಾಲೂಕಿನ ಕೇಣಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಾಣಿಜ್ಯ ಬಂದರು ಯೋಜನೆಯನ್ನು ಕೈಬಿಡಬೇಕು ಹಾಗೂ ಸ್ಥಳೀಯರಿಗೆ ರಕ್ಷಣೆ ನೀಡುವಂತೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಅವರು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರಿಗೆ ಗುರುವಾರ ಮಧ್ಯಾಹ್ನ 1ಕ್ಕೆ ಮನವಿ ಸಲ್ಲಿಸಿದ್ದಾರೆ. ಬಂದರು ನಿರ್ಮಾಣದಿಂದ ಸ್ಥಳೀಯ ಜನರಿಗೆ ಹಾಗೂ ಮೀನುಗಾರರಿಗೆ ತೊಂದರೆ ಆಗಲಿದೆ ತಕ್ಷಣ ಸರ್ಕಾರ ಈ ಯೋಜನೆ ಕೈ ಬಿಡುವಂತೆ ಆಗ್ರಹ ಮಾಡಿದ್ದಾರೆ.