ಬಾದಾಮಿಯಲ್ಲಿ ನಡೆದ ಸಿಲಿಂಡರ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಕ್ರಮವಾಗಿ ಸಿಲಿಂಡರ್ ಸಂಗ್ರಹಿಸಿಟ್ಟವರ ವಿರುದ್ದ ಪ್ರಕರಣ ದಾಖಲಾಗಿದೆ ಎಂದು ಬಾಗಲಕೋಟೆ ಎಸ್ಪಿ ಸಿದ್ಧಾರ್ಥ ಗೋಯಲ್ ಅವರು ತಿಳಿಸಿದ್ದಾರೆ.ನಗರದ ತಮ್ಮ ಕಚೇರಿಯಲ್ಲಿ ಮಾತನಾಡಿರುವ ಅವರು ಈ ಸಿಲಿಂಡರ್ ಬ್ಲಾಸ್ಟ ಘಟನೆಯಲ್ಲಿ ಇಬ್ಬರು ಹೋಮಗಾರ್ಡ್ ಸೇರಿ ಎಂಟು ಜನರಿಗೆ ಗಾಯವಾಗಿದೆ ಎಂದು ತಿಳಿಸಿದ್ದಾರೆ.ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ.ಇನ್ನು ತನಿಖೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.